ಗ್ರಹ ಲಕ್ಷ್ಮೀ ಯೋಜನೆಗೆ ರಾಜ್ಯದಲ್ಲಿ ಚಾಲನೆ;ಹೊನ್ನಾವರ ಬ್ಲಾಕ್ ಕಾಂಗ್ರೆಸ್‍ನಿಂದ ಸಿಹಿ ವಿತರಣೆ
ಹೊನ್ನಾವರ : ರಾಜ್ಯದ ಸಿದ್ದರಾಮಯ್ಯ ನೇತ್ರತ್ವದ ಕಾಂಗ್ರೆಸ್ ಸರಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹ ಲಕ್ಷ್ಮೀ ಯೋಜನೆಗೆ ಇಂದು ಮೈಸೂರಿನಲ್ಲಿ ಚಾಲನೆ ಸಿಗುತ್ತಿದ್ದಂತೆ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ್ ಎನ್. ತೆಂಗೇರಿ ನೇತ್ರತ್ವದಲ್ಲಿ ಸಂಭ್ರಮಾಚರಣೆ ನಡೆಸಿದರು.
ನಂತರ ನಗರದ ಪಟ್ಟಣ ಪಂಚಾಯತ್ ಸಭಾಭವನದಲ್ಲಿ ಸಮಾವೇಶಗೊಂಡ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿ ಯಜಮಾನಿ ತಾಯಂದಿರಿಗೆ ಕಾಂಗ್ರೆಸ್ ಕಾರ್ಯಕರ್ತರು ಸಿಹಿ ವಿತರಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಹೊನ್ನಾವರ ನಗರ ಘಟಕದ ಅಧ್ಯಕ್ಷ ಚಂದ್ರಶೇಖರ ಚಾರೋಡಿ, ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಕೃಷ್ಣ ಹರಿಜನ, ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಜಕ್ರಿಯ್ಯಾ ಶೇಖ, ಜಿಲ್ಲಾ ಕಾಂಗ್ರೆಸ್ ಸೇವಾದಳದ ಪ್ರಧಾನ ಕಾರ್ಯದರ್ಶಿ ಕೃಷ್ಣ ಮಾರಿಮನೆ, ಪಕ್ಷದ ಪ್ರಮುಖರಾದ ಹನೀಪ್ ಶೇಖ, ಶ್ರೀಕಾಂತ್ ಮೇಸ್ತ, ಮನ್ಸೂರ್ ಸೈಯದ್, ಪಾತ್ರೊನ್ ಪರ್ನಾಂಡಿಸ್, ಉದಯ ಮೇಸ್ತ, ವಸಿಂ ಸಾಬ್, ಬ್ರಾಝಿಲ್ ಪಿಂಟೊ, ಗಣಪತಿ ಮೇಸ್ತ ಇನ್ನೂ ಹಲವರು ಪಾಲ್ಗೊಂಡಿದ್ದರು.
Leave a Comment