ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಅರ್ಜಿ ಆಹ್ವಾನ
ಅರಣ್ಯ ಮಹಾವಿದ್ಯಾಲಯ ಶಿರಸಿಯ ಅರಣ್ಯ ಜೀವ ವಿಜ್ಞಾನ ಮತ್ತು ವೃಕ್ಷಾಭಿವೃದ್ಧಿ ವಿಭಾಗದಲ್ಲಿ ಕಾರ್ಯ ನಿರ್ವಾಹಿಸಲು ಒಬ್ಬ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ತಾತ್ಕಾಲಿಕ ನೇಮಕಾತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿ ನಮೂನೆಯ ಎರ- ಡು ಪ್ರತಿಗಳೊಂದಿಗೆ ಜನವರಿ 3 ರಂದು ಬೆಳಗ್ಗೆ 11 ಗಂಟೆಗೆ, ಡೀನ್ ಅರಣ್ಯ ಮಹಾವಿದ್ಯಾಲಯ ಶಿರಸಿ ಅವರ ಕಾರ್ಯಾಲಯದಲ್ಲಿ ಸಂದರ್ಶನಕ್ಕೆ ಹಾಜರಾಗಬೇಕು.
ಸಂದರ್ಶನಕ್ಕೆ ಬರುವಾಗ ತಮ್ಮ ವಿದ್ಯಾರ್ಹತೆಗೆ ಸಂಬಂಧ ಪಟ್ಟ ಎಲ್ಲಾ ಮೂಲ ದಾಖಲಾತಿಗಳನ್ನು ಹಾಗೂ ಅವುಗಳ ಎರಡು ದೃಢಿಕೃತ ಪ್ರತಿಗಳನ್ನು ಸಂದರ್ಶನದ ಸಮಯದಲ್ಲಿ ತರುವಂತೆ ಅರಣ್ಯ ಮಹಾವಿದ್ಯಾಲಯದ ಆಡಳಿ- ತಾಧಿಕಾರಿ ಆರ್. ವಾಸುದೇವ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Leave a Comment