28ಕ್ಕೆ ಪೊಲೀಸ್ ಕಾನ್ಸ್‌ಟೇಬಲ್ ಲಿಖಿತ ಪರೀಕ್ಷೆ 2024
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ (ಸಿಎಆರ್& ಡಿಎಆರ್) 3064 ಹುದ್ದೆಗಳಿಗೆ ಲಿಖಿತ ಪರೀಕ್ಷೆಯು ಜ.28ರಂದು ಬೆಳಿಗ್ಗೆ 11ರಿಂದ 12.30ರವರೆಗೆ ನಡೆಯಲಿದೆ.
ಸದರಿ ಲಿಖಿತ ಪರೀಕ್ಷೆಗೆ ಅರ್ಹರಿರುವ ಅಭ್ಯರ್ಥಿಗಳಿಗೆ ಕರೆ ಪತ್ರದ ಬಗ್ಗೆ ಎಸ್‌ಎಂಎಸ್ ಮೂಲಕ ಮಾಹಿತಿಯನ್ನು ನೀಡಲಾಗುವುದು ಹಾಗೂ ಕರೆಪತ್ರ ಲಿಂಕ್‌ನ್ನು ಕಳುಹಿಸಲಾಗುವುದು.
ಅಭ್ಯರ್ಥಿಗಳು ಕರೆಪತ್ರವನ್ನು ಡೌನ್ ಲೋಡ್ ಮಾಡಿಕೊಂಡು ನಿಗದಿತ ದಿನಾಂಕದಂದು ಲಿಖಿತ ಪರೀಕ್ಷೆಗೆ ಹಾಜರಾಗುವಂತೆ ಜಿಲ್ಲಾ ಪೊಲೀಸ ಇಲಾಖೆಯ ಸಾರ್ವಜನಿಕ ಸಂಪರ್ಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Leave a Comment