ಅಗ್ನಿವೀರ ವಾಯು ಆಯ್ಕೆ: ಅರ್ಜಿ ಆಹ್ವಾನ
ಭಾರತೀಯ ವಾಯುಪಡೆಯ ಅಗ್ನಿಪಥ ಯೋಜನೆಯಡಿಯಲ್ಲಿ ಅಗ್ನಿವೀರ ವಾಯು ಆಯ್ಕೆ ಪರೀಕ್ಷೆಗಾಗಿ ಅವಿವಾಹಿತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ.
ಪಿಯುಸಿ/10+2 ತತ್ಸಮಾನ ಪರೀಕ್ಷೆಯಲ್ಲಿ ಶೇ.50 ಅಂಕಗಳೊಂದಿಗೆ ಅಥವಾ ಡಿಪ್ಲೊಮೋ ಕನಿಷ್ಠ ಶೇ.50 ಅಂಕಗಳೊಂದಿಗೆ ಹಾಗೂ ಇಂಗ್ಲಿಷ್ ವಿಷಯದಲ್ಲಿ ಕನಿಷ್ಠ ಶೇ.50ತೇರ್ಗಡೆಯಾಗಿದ್ದು, 2 ಜನವರಿ 2004 ರಿಂದ 2 ಜುಲೈ 2007 ರ ನಡುವೆ ಜನಿಸಿರುವ ಅಭ್ಯರ್ಥಿಗಳು ಫೆ.6 ರೊಳಗಾಗಿ ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ https://careerindianairforce.cdac.in , https://agnipath- vayu.cdac.in ವೆಬ್‌ಸೈಟ್‌ನ್ನು ಸಂಪರ್ಕಿಸಬಹುದಾಗಿದೆ ಎಂದು ಯೋಜನಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Leave a Comment