ಹೊನ್ನಾವರ : ಇತ್ತೀಚೆಗೆ ಅನಾರೋಗ್ಯದಿಂದ ನಿಧನ ಹೊಂದಿದ ಹೊನ್ನಾವರ ತಾಲೂಕಿನ ಹಳದೀಪುರ ಗ್ರಾಮದ ಕಾಂಗ್ರೆಸ್ ಮುಖಂಡ ದೇವಾನಂದ ಗೊಸಾವಿ ಅವರ ಮನೆಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ನಿವೇದಿತ್ ಆಳ್ವಾ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವಾನ ಹೇಳಿದರು. ಪರಿಶಿಷ್ಟ ಪಂಗಡದ ಗೊಸಾವಿ ಸಮುದಾಯಕ್ಕೆ ಸೇರಿದ್ದ ದೇವಾನಂದ ಅವರು ಕಳೆದ ನಾಲ್ಕು ದಶಕಗಳಿಂದ ಹಳದೀಪುರ ಭಾಗದಲ್ಲಿ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಪಕ್ಷಕ್ಕೆ ತಮ್ಮ ಅಮೂಲ್ಯ ಸೇವೆ ಸಲ್ಲಿಸಿದ್ದರು.
ಹಾಲಿ ಹೊನ್ನಾವರ ಅರ್ಬನ್ ಬ್ಯಾಂಕ್ ನಿರ್ದೆಶಕರಾಗಿ ಸೇವೆ ಸಲ್ಲಿಸುತ್ತಿದ್ದರು. ಹಿರಿಯ ಮುಖಂಡ ದೇವಾನಂದ ಅವರನ್ನು ಕಳೆದುಕೊಂಡ ಕಾಂಗ್ರೆಸ್ ಪಕ್ಷ ಈ ಭಾಗದಲ್ಲಿ ಬಡವಾಗಿದೆ ಎಂದು ಆಳ್ವಾ ನೊಂದು ನುಡಿದರು. ಈ ಸಂದರ್ಭದಲ್ಲಿ ಅವರೊಂದಿಗೆ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ್ ಎನ್. ತೆಂಗೇರಿ, ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಪುಷ್ಪಾ ಮಹೇಶ್, ಅಲ್ಪಸಂಖ್ಯಾತ ವಿಭಾಗದ ಆಧ್ಯಕ್ಷ ಜಕ್ರಿಯ್ಯಾ ಶೇಖ, ಜಿಲ್ಲಾ ಸೇವಾದಳದ ಪ್ರಧಾನ ಕಾರ್ಯದರ್ಶಿ ಕೃಷ್ಣ ಮಾರಿಮನೆ, ಕಾರ್ಯದರ್ಶಿ ಮಂಜುನಾಥ್ ಮುಕ್ರಿ, ಮುಖಂಡರಾದ ಮಹೇಶ್ ನಾಯ್ಕ, ಗಜಾನನ ನಾಯ್ಕ ಇನ್ನೂ ಮುಂತಾದವರು ಉಪಸ್ಥಿತರಿದ್ದರು.
Leave a Comment