ಕಾರವಾರ: ನಗರ ಪ್ರದೇಶಗಳಲ್ಲಿ ಸೇವಾ ಕೇಂದ್ರಗಳ ಸಂಖ್ಯೆಯ ಬೇಡಿಕೆ ಹೆಚ್ಚಿಗೆ ಇರುವುದರಿಂದ ಹಾಗೂ ಹೆಚ್ಚಿನ ನಾಗರಿಕರಿಗೆ ಸರ್ಕಾರದ ವಿವಿಧ ಸೇವೆಗಳು ಸುಲಲಿತವಾಗಿ ಸಿಗುವಂತೆ ಮಾಡುವ ದೃಷ್ಟಿಯಿಂದ ದಾಂಡೇಲಿ ನಗರ ಸಭಾ ವ್ಯಾಪ್ತಿಯಲ್ಲಿ 1, ಶಿರಸಿ ನಗರಸಭಾ ವ್ಯಾಪ್ತಿಯಲ್ಲಿ 2, ಅಂಕೋಲಾ ಪುರಸಭೆ ವ್ಯಾಪ್ತಿಯಲ್ಲಿ 2, ಭಟ್ಕಳ ಪುರಸಭೆ ವ್ಯಾಪ್ತಿಯಲ್ಲಿ 2, ಹಳಿಯಾಳ ಪುರಸಭೆ ವ್ಯಾಪ್ತಿಯಲ್ಲಿ 1, ಕುಮಟಾ ಪುರಸಭೆ ವ್ಯಾಪ್ತಿಯಲ್ಲಿ 2 ಕರ್ನಾಟಕ ಒನ್ ಫ್ರಾಂಚೈಸಿ ಕೇಂದ್ರಗಳನ್ನು ಸ್ಥಾಪಿಸಲು ಅರ್ಹ ಫ್ರಾಂಚೈಸಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಫೆ.15 ಕೊನೆಯ ದಿನವಾಗಿದ್ದು, ಅರ್ಹ https://www.karnatakaone. gov.in/Public/FranchiseeTeam ಮೂಲಕ ಕರ್ನಾಟಕ ಒನ್ ಫ್ರಾಂಚೈಸಿ ಕೇಂದ್ರಗಳ ಸ್ಥಾಪನೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Leave a Comment