ಡಾ.ಬಿ. ಆರ್. ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆಗೆ ಅರ್ಜಿ ಆಹ್ವಾನ 2025-26
ಕಾರವಾರ ತಾಲೂಕಿನ ಅಮದಳ್ಳಿಯ ಡಾ.ಬಿ. ಆರ್. ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆಗೆ 2025-26 ನೇ ಸಾಲಿಗೆ ಆರನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಈಗಾಗಲೇ ಐದನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಜ.25 ಕೊನೆಯ ದಿನವಾಗಿದ್ದು, ಪ್ರವೇಶ ಪರೀಕ್ಷೆಯು ಫೆ.15 ರಂದು ನಡೆಯಲಿದೆ.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು: ವಿದ್ಯಾರ್ಥಿಯ (ಎಸ್ .ಟಿ.ಎಸ್) ನಂ, ಚಾಲ್ತಿಯಲ್ಲಿರುವ ವಿದ್ಯಾರ್ಥಿಯ ಜಾತಿ ಮತ್ತು ಆದಾಯ ಪ್ರಮಾಣ ಪತ್ರದ ಪ್ರತಿ ಮತ್ತು ಆರ್. ಡಿ ಸಂಖ್ಯೆ, ಚಾಲ್ತಿಯಲ್ಲಿರುವ ಪೋಷಕರ ಮೊಬೈಲ್ ಸಂಖ್ಯೆ, ವಿದ್ಯಾರ್ಥಿಯ ಇತ್ತಿಚೀನ 2 ಭಾವಚಿತ್ರ, ಆಧಾರ ಕಾರ್ಡ್ ಪ್ರತಿ, ವಿಶೇಷ ವರ್ಗಕ್ಕೆ ಸೇರಿದ್ದರೆ ಸಂಬಂಧಿಸಿದ ಪ್ರಮಾಣ ಪತ್ರ. ಆಸಕ್ತ ವಿದ್ಯಾರ್ಥಿಗಳು ಆನ್ಲೈನ್ನಲ್ಲಿ ಅರ್ಜಿಯನ್ನು ಭರ್ತಿ ಮಾಡಲು http://kea.kar.nic.in https:// kreis.karnataka.gov.in
89519920175, 9164673124 ಸಂಪರ್ಕಿಸುವಂತೆ ಡಾ.ಬಿ.ಆರ್ ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆಯ ಪ್ರಾಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Leave a Comment