• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಹೆದ್ದಾರಿ ಅಗಲೀಕರಣ ಕಾಮಗಾರಿ;ಕೃತಕ ನೆರೆ ಉಂಟಾಗದಿರಲಿ

May 23, 2017 by Sachin Hegde Leave a Comment

ಕಾರವಾರ:

ಹೆದ್ದಾರಿ ಅಗಲೀಕರಣ ಕಾಮಗಾರಿಯಿಂದಾಗಿ ಮಳೆಯ ನೀರು ಸರಾಗವಾಗಿ ಹರಿದು ಹೋಗದೆ ಕೃತಕ ನೆರೆ ಇತ್ಯಾದಿ ತೊಂದರೆಗಳು ಉಂಟಾಗಬಹುದಾದ ಸ್ಥಳಗಳನ್ನು ಗುರುತಿಸಿ ಮುನ್ನಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಸ್.ನಕುಲ್ ಐಆರ್‍ಬಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಐಆರ್‍ಬಿ ಸಂಸ್ಥೆ ಪ್ರತಿನಿಧಿಗಳು ಹಾಗೂ ವಿವಿಧ ಇಲಾಖಾ ಅಧಿಕಾರಿಗಳ ಸಭೆಯಲ್ಲಿ ಮಳೆಗಾಲ ಪೂರ್ವದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸೂಚನೆಗಳನ್ನು ನೀಡಿದರು.
ರಸ್ತೆಯ ಎರಡು ಬದಿಗಳಲ್ಲಿ ಮಳೆಯ ನೀರು ಸರಾಗವಾಗಿ ಹರಿದು ಹೋಗಲು ಸೂಕ್ತ ಚರಂಡಿ ವ್ಯವಸ್ಥೆಯನ್ನು ಮಾಡಬೇಕು. ರಸ್ತೆಗೆ ಅಡ್ಡವಾಗಿ ಮೋರಿಗಳ ನಿರ್ಮಾಣ ಕಾರ್ಯವನ್ನು ತ್ವರಿತಗೊಳಿಸಬೇಕು. ಗುಡ್ಡ ಕುಸಿತ ಸಂಭವಿಸಬಹುದಾದ ಸ್ಥಳಗಳನ್ನು ಗುರುತಿಸಿ ಸಂಭಾವ್ಯ ಅವಘಡ ತಪ್ಪಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ಕಳೆದ ಬಾರಿ ಗುಡ್ಡ ಕುಸಿತ ಉಂಟಾದ ಸ್ಥಳಗಳಲ್ಲಿ ಹೆಚ್ಚಿನ ಮುನ್ನಚ್ಚರಿಕೆ ಅಗತ್ಯ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.
ಕುಮಟಾ ವಿಭಾಗದಲ್ಲಿ 16ಕಡೆಗಳಲ್ಲಿ ಮಣ್ಣು ಕುಸಿತ ಸಂಭವಿಸಬಹುದಾದ ಸ್ಥಳಗಳನ್ನು ಗುರುತಿಸಲಾಗಿದೆ. ಇದೇ ರೀತಿ ಎಲ್ಲಾ ವಿಭಾಗಗಳಲ್ಲಿ ಅಂತಹ ಸ್ಥಳಗಳನ್ನು ಗುರುತಿಸಿ ಪಟ್ಟಿಯನ್ನು ತಕ್ಷಣ ಒದಗಿಸಬೇಕು. ಧಾರೇಶ್ವರ ಮತ್ತು ಕುಮಟಾ ಭಾಗದಲ್ಲಿ ಮೋರಿ ನಿರ್ಮಾಣ ಕಾರ್ಯವನ್ನು ತ್ವರಿತಗೊಳಿಸಬೇಕು. ಮಳೆಗಾಲದ ಒಳಗಾಗಿ ಕಾರವಾರದ ಸದಾಶಿವಗಢ ಗುಡ್ಡವನ್ನು ತೆರವುಗೊಳಿಸುವ ಕಾರ್ಯವನ್ನು ಪೂರ್ಣಗೊಳಿಸಬೇಕು. ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಿ ಹಸ್ತಾಂತರಿಸಲಾಗಿರುವ ಸ್ಥಳಗಳಲ್ಲಿ ಸಹ ಇನ್ನೂ ಕಾಮಗಾರಿಯನ್ನು ಪ್ರಾರಂಭಿಸಿರುವುದಿಲ್ಲ. ಹಸ್ತಾಂತರಿಸಲಾಗಿರುವ ಸ್ಥಳಗಳಲ್ಲಿ ಕಾಮಗಾರಿಯನ್ನು ಪ್ರಾರಂಭಿಸಲು ಅಡ್ಡಿಯೇನಿದೆ ಎಂದು ಜಿಲ್ಲಾಧಿಕಾರಿ ಅವರು ಪ್ರಶ್ನಿಸಿದರು.
ಚತುಷ್ಪಥ ಕಾಮಗಾರಿಯಿಂದಾಗಿ ಹಾಳಾಗಿರುವ ಬೋರ್‍ವೆಲ್ ಹಾಗೂ ನೀರಿನ ಪೈಪ್‍ಲೈನ್‍ಗಳನ್ನು ಐಆರ್‍ಬಿ ವತಿಯಿಂದ ಪುನರ್ ನಿರ್ಮಿಸಬೇಕು. ಎಷ್ಟು ಬೋರ್‍ವೆಲ್‍ಗಳು ಕಾಮಗಾರಿಯಿಂದ ತೆರವಾಗಿವೆ ಎಂಬ ಕುರಿತು ಮಾಹಿತಿಯನ್ನು ಒದಗಿಸುವಂತೆ ತಹಶೀಲ್ದಾರ್‍ಗಳಿಗೆ ಅವರು ಸೂಚನೆ ನೀಡಿದರು.
ಮಳೆಗಾಲದಲ್ಲಿ ಹೆದ್ದಾರಿಯಲ್ಲಿ ಅಪಘಾತ ಸಂಭವಿಸುವ ಸಾಧ್ಯತೆಗಳು ಅಧಿಕವಿದ್ದು, ಈ ಹಿನ್ನೆಲೆಯಲ್ಲಿ ಕಾಮಗಾರಿ ನಡೆಯುವ ಸ್ಥಳಗಳಲ್ಲಿ, ತಿರುವುಗಳಲ್ಲಿ ಎಚ್ಚರಿಕೆ ಫಲಕಗಳನ್ನು ಕಡ್ಡಾಯವಾಗಿ ಹಾಕಬೇಕು. ತಾತ್ಕಾಲಿಕ ಬ್ಯಾರಿಕೇಡ್‍ಗಳನ್ನು ಸಮರ್ಪಕವಾಗಿ ಅಳವಡಿಸಿ ಅದಕ್ಕೆ ರಿಫ್ಲೆಕ್ಟರ್‍ಗಳನ್ನು ಅಳವಡಿಸಬೇಕು. ಮಳೆಯಿಂದ ಹಾನಿ ಸಂಭವಿಸಿದರೆ ತಕ್ಷಣ ಕಾರ್ಯಪ್ರವೃತ್ತವಾಗಲು ಐಆರ್‍ಬಿ ಅಧಿಕಾರಿ ಸಿಬ್ಬಂದಿಗಳು ಯಂತ್ರೋಪಕರಣಗಳೊಂದಿಗೆ ಸದಾ ಸನ್ನದ್ಧರಾಗಿರಬೇಕು. ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿದರೆ ಮಳೆಗಾಲದಲ್ಲಿ ಯಾವುದೇ ಅವಘಡಗಳು ಸಂಭವಿಸುವುದನ್ನು ತಪ್ಪಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಎಚ್.ಪ್ರಸನ್ನ, ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ಆರ್.ದೇವರಾಜ್, ಉಪವಿಭಾಗಾಧಿಕಾರಿಗಳು, ತಹಶೀಲ್ದಾರ್‍ಗಳು, ಐಆರ್‍ಬಿ ಸಂಸ್ಥೆಯ ಪ್ರತಿನಿಧಿಗಳು, ವಿವಿಧ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Haliyal News, National News Tagged With: ಅಗಲೀಕರಣ, ಅಧಿಕಾರಿ, ಅಪಘಾತ, ಉಂಟಾಗದಿರಲಿ, ಐಆರ್‍ಬಿ, ಕಾಮಗಾರಿ, ಕಾರ್ಯ, ಕುಮಟಾ, ಕುಸಿತ, ಕೃತಕ, ಕ್ರಮ, ಗುಡ್ಡ, ಧಾರೇಶ್ವರ, ನಿರ್ಮಾಣ, ನೀರು, ನೆರೆ, ಭೂಸ್ವಾಧೀನ, ಮಣ್ಣು, ಮಳೆ, ಮುನ್ನಚ್ಚರಿಕೆ, ಮೋರಿ, ಯಂತ್ರೋಪಕರಣ, ವಿಭಾಗ, ಹೆದ್ದಾರಿ, ಹೆದ್ದಾರಿಯಲ್ಲಿ

Explore More:

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,060 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar