ಕಾರವಾರ:ಬೇಸಿಗೆ ರಜೆ ಮುಗಿದು ಸೋಮವಾರದಿಂದ ಶಾಲೆಗಳು ಆರಂಭವಾಗಿದ್ದು, ಮೊದಲ ದಿನ ಚಿಣ್ಣರಿಗೆ ಭವ್ಯ ಸಾಗತ ದೊರೆಯಿತು. ಶಿಕ್ಷಣ ಇಲಾಖೆ ಹಾಗೂ ಶಾಲಾ ಆಡಳಿತ ಮಂಡಳಿಯವರು ಮಕ್ಕಳಿಗೆ ಹೂ ವಿತರಿಸಿ, ಸಿಹಿ ತಿನಿಸಿ ತರಗತಿಗೆ ಬರಮಾಡಿಕೊಂಡರು. ಮೂಲಭೂತ ಸೌಕರ್ಯಗಳ ಕೊರತೆಯ ನಡುವೆಯೇ ಈ ಬಾರಿ ಉತ್ತಮ ಶಿಕ್ಷಣ ನೀಡುವದಾಗಿ ಶಿಕ್ಷಕರು ಹೇಳಿಕೊಂಡಿದ್ದು, ಅಧಿಕಾರಿಗಳು ಕೂಡ ಅದೇ ಭರವಸೆ ನೀಡಿದರು. ಇನ್ನು ಎಲ್ಲಾ ಮಕ್ಕಳಿಗೂ ಪುಸ್ತಕ, ಸಮವಸ್ತ್ರ ಒದಗಿಸಲು ಶಿಕ್ಷಣ … [Read more...] about ಚಿಣ್ಣರಿಗೆ ಭವ್ಯ ಸಾಗತ
ಕುಮಟಾ
ರಸ್ತೆ ಮರು ನಾಮಕರಣಕ್ಕೆ ಸರ್ಕಾರಕ್ಕೆ ಸಲ್ಲಿಕೆಯಾದ ಪ್ರಸ್ತಾವನೆ
ಕಾರವಾರ:ಹೆದ್ದಾರಿಯಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಳಕ್ಕೆ ಮದ್ಯದ ನಶೆಯೇ ಕಾರಣ ಎಂದು ಮನಗಂಡ ನ್ಯಾಯಾಯಲ ಹೆದ್ದಾರಿ ಪಕ್ಕದಲ್ಲಿನ ಮದ್ಯದಂಗಡಿಗಳ ನಿಷೇಧಕ್ಕೆ ಆದೇಶಿಸಿದ್ದು, ಗೋವಾ ಮಾದರಿಯಲ್ಲಿ ಕರ್ನಾಟಕದಲ್ಲಿಯೂ ಹೆದ್ದಾರಿಗಳನ್ನು ಸ್ಥಳೀಯ ರಸ್ತೆಗಳನ್ನಾಗಿ ಪರಿವರ್ತಿಸುವ ಪ್ರಸ್ತಾವನೆ ಸಲ್ಲಿಕೆಯಾಗಿದೆ! ಜಿಲ್ಲೆಯ ಆಯಾ ತಾಲೂಕಿನಲ್ಲಿರುವ ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯತ್ ವ್ಯಾಪ್ತಿಗಳಲ್ಲಿ ಸಾಗುವ ರಾಜ್ಯ ಹೆದ್ದಾರಿಗಳನ್ನು ನಗರ ರಸ್ತೆಗಳೆಂದು ಮರು ನಾಮಕರಣ … [Read more...] about ರಸ್ತೆ ಮರು ನಾಮಕರಣಕ್ಕೆ ಸರ್ಕಾರಕ್ಕೆ ಸಲ್ಲಿಕೆಯಾದ ಪ್ರಸ್ತಾವನೆ
ವಿದ್ಯುತ್ ನಿಲುಗಡೆ
ಭಟ್ಕಳ:ಭಟ್ಕಳ ತಾಲೂಕಿನಲ್ಲಿ ಮೇ.24ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯ ತನಕ ವಿದ್ಯುತ್ ನಿಲುಗಡೆ ಮಾಡಲಾಗುವುದು ಎಂದು ಹೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕುಮಟಾ ಹೊನ್ನಾವರದ ನಡುವಿನ 110 ಕೆ.ವಿ.ಎ. ಲೈನ್ನಲ್ಲಿ ಕಾರ್ಯ ಮಾಡಬೇಕಾಗಿರುವುದರಿಂದ ನಿಲುಗಡೆ ಅನಿವಾರ್ಯವಾಗಿದ್ದು ವಿದ್ಯುತ್ ಗ್ರಾಹಕರು ಸಹಕರಿಸುವಂತೆ ಕೋರಿದ್ದಾರೆ. … [Read more...] about ವಿದ್ಯುತ್ ನಿಲುಗಡೆ
ಹೆದ್ದಾರಿ ಅಗಲೀಕರಣ ಕಾಮಗಾರಿ;ಕೃತಕ ನೆರೆ ಉಂಟಾಗದಿರಲಿ
ಕಾರವಾರ:ಹೆದ್ದಾರಿ ಅಗಲೀಕರಣ ಕಾಮಗಾರಿಯಿಂದಾಗಿ ಮಳೆಯ ನೀರು ಸರಾಗವಾಗಿ ಹರಿದು ಹೋಗದೆ ಕೃತಕ ನೆರೆ ಇತ್ಯಾದಿ ತೊಂದರೆಗಳು ಉಂಟಾಗಬಹುದಾದ ಸ್ಥಳಗಳನ್ನು ಗುರುತಿಸಿ ಮುನ್ನಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಸ್.ನಕುಲ್ ಐಆರ್ಬಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಐಆರ್ಬಿ ಸಂಸ್ಥೆ ಪ್ರತಿನಿಧಿಗಳು ಹಾಗೂ ವಿವಿಧ ಇಲಾಖಾ ಅಧಿಕಾರಿಗಳ ಸಭೆಯಲ್ಲಿ ಮಳೆಗಾಲ ಪೂರ್ವದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ … [Read more...] about ಹೆದ್ದಾರಿ ಅಗಲೀಕರಣ ಕಾಮಗಾರಿ;ಕೃತಕ ನೆರೆ ಉಂಟಾಗದಿರಲಿ
ಮೇ 23 ರಂದು ಬೆಳಗ್ಗೆ 11 ಗಂಟೆಯಿಂದ 1 ಗಂಟೆಯ ವರೆಗೆ ಅಂಕೋಲಾ ಪ್ರವಾಸ ಮಂದಿರದಲ್ಲಿ ಅಹವಾಲು ಸ್ವೀಕಾರ
ಕಾರವಾರ:ಜಿಲ್ಲೆಯ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಪೋಲೀಸ್ ಠಾಣೆಯ ಅಧಿಕಾರಿಗಳು ಮೇ 23 ರಂದು ಬೆಳಗ್ಗೆ 11 ಗಂಟೆಯಿಂದ 1 ಗಂಟೆಯ ವರೆಗೆ ಅಂಕೋಲಾ ಪ್ರವಾಸ ಮಂದಿರದಲ್ಲಿ ಅಹವಾಲು ಸ್ವೀಕರಿಸಲಿದ್ದಾರೆ. ಅಂದು ಮಧ್ಯಾಹ್ನ 3 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಕುಮಟಾ ಪ್ರವಾಸಿ ಮಂದಿರದಲ್ಲಿ ಹಾಗೂ ಮೇ 24 ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಹೊನ್ನಾವರ ಪ್ರವಾಸಿ ಮಂದಿರ ಮತ್ತು ಮ. 3 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಭಟ್ಕಳ ಪ್ರವಾಸಿ ಮಂದಿರದಲ್ಲಿ … [Read more...] about ಮೇ 23 ರಂದು ಬೆಳಗ್ಗೆ 11 ಗಂಟೆಯಿಂದ 1 ಗಂಟೆಯ ವರೆಗೆ ಅಂಕೋಲಾ ಪ್ರವಾಸ ಮಂದಿರದಲ್ಲಿ ಅಹವಾಲು ಸ್ವೀಕಾರ