ಕಾರವಾರ:ದಶಕಗಳಿಂದ ನೆನೆಗುದಿಗೆ ಬಿದ್ದಿರುವ ಸೀಬರ್ಡ್ ನೌಕಾನೆಲೆ ನಿರಾಶ್ರಿತರ ಪರಿಹಾರ ಕಾರ್ಯವನ್ನು ತ್ವರಿತಗೊಳಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಡಿಫೆನ್ಸ್ ಎಸ್ಟೇಟ್ ಅಧಿಕಾರಿ ಕಚೇರಿ ಶಾಖೆಯನ್ನು ಆರಂಭಿಸಲು ರಕ್ಷಣಾ ಇಲಾಖೆ ಒಪ್ಪಿಗೆ ನೀಡಿದ್ದು, ಪರಿಹಾರ ವಿತರಣೆ ಕಾರ್ಯ ತ್ವರಿತಗೊಳ್ಳುವ ಆಶಾಭಾವನೆ ಮೂಡಿದೆ. ರಾಜ್ಯದ ಮುಖ್ಯ ಕಾರ್ಯದರ್ಶಿ ಸುಭಾಷ್ ಕುಂಟಿಯಾ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ಸೋಮವಾರ ನಡೆದ ಉನ್ನತ ಮಟ್ಟದ ಸಭೆಯಲ್ಲಿ … [Read more...] about ಸೀಬರ್ಡ್ ನೌಕಾನೆಲೆ ನಿರಾಶ್ರಿತರ ಪರಿಹಾರ ಕಾರ್ಯವನ್ನು ತ್ವರಿತಗೊಳಿಸಲು ಡಿಫೆನ್ಸ್ ಎಸ್ಟೇಟ್ ಅಧಿಕಾರಿ ಕಚೇರಿ ಶಾಖೆ ಆರಂಭ
ಕಾರ್ಯ
ಜಿಲ್ಲಾಧಿಕಾರಿ ಸೂಚನೆ,ಚರಂಡಿ ಸ್ವಚ್ಚತೆ ಭರದಿಂದ
ಕಾರವಾರ:ಮಳೆಗಾಲಕ್ಕಿಂತ ಮೊದಲು ಚರಂಡಿ ಸ್ವಚ್ಛಗೊಳಿಸಲು ಜಿಲ್ಲಾಧಿಕಾರಿ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಜಿಲ್ಲೆಯ ಆಯಾ ತಾಲೂಕಿನ ಚರಂಡಿ, ರಾಜಕಾಲುವೆಗಳ ಸ್ವಚ್ಛತೆ ಕಾರ್ಯ ಭರದಿಂದ ಸಾಗಿದೆ. ಜಿಲ್ಲೆಯ ಎಲ್ಲ ತಾಲೂಕಿನ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಮುಂದಿನ 5 ದಿನಗಳ ಕಾಲ ಚರಂಡಿ ಸ್ವಚ್ಛತಾ ಕಾರ್ಯ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಸೂಚನೆ ನೀಡಿದ್ದು ಚರಂಡಿಗಳಲ್ಲಿ ತುಂಬಿರುವ ಕಸಕಡ್ಡಿ, ಮಣ್ಣು, ಗಿಡಗಂಟಿಗಳನ್ನು ತೆಗೆದು … [Read more...] about ಜಿಲ್ಲಾಧಿಕಾರಿ ಸೂಚನೆ,ಚರಂಡಿ ಸ್ವಚ್ಚತೆ ಭರದಿಂದ
ಹೆದ್ದಾರಿ ಅಗಲೀಕರಣ ಕಾಮಗಾರಿ;ಕೃತಕ ನೆರೆ ಉಂಟಾಗದಿರಲಿ
ಕಾರವಾರ:ಹೆದ್ದಾರಿ ಅಗಲೀಕರಣ ಕಾಮಗಾರಿಯಿಂದಾಗಿ ಮಳೆಯ ನೀರು ಸರಾಗವಾಗಿ ಹರಿದು ಹೋಗದೆ ಕೃತಕ ನೆರೆ ಇತ್ಯಾದಿ ತೊಂದರೆಗಳು ಉಂಟಾಗಬಹುದಾದ ಸ್ಥಳಗಳನ್ನು ಗುರುತಿಸಿ ಮುನ್ನಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಸ್.ನಕುಲ್ ಐಆರ್‍ಬಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಐಆರ್‍ಬಿ ಸಂಸ್ಥೆ ಪ್ರತಿನಿಧಿಗಳು ಹಾಗೂ ವಿವಿಧ ಇಲಾಖಾ ಅಧಿಕಾರಿಗಳ ಸಭೆಯಲ್ಲಿ ಮಳೆಗಾಲ ಪೂರ್ವದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ … [Read more...] about ಹೆದ್ದಾರಿ ಅಗಲೀಕರಣ ಕಾಮಗಾರಿ;ಕೃತಕ ನೆರೆ ಉಂಟಾಗದಿರಲಿ
ಶಿರಸ್ತೇದಾರ ಕಛೇರಿಯ ಬೇಜವಾಬ್ದಾರಿ ಕಾರ್ಯವೈಖರಿಯನ್ನು ಸರಿಪಡಿಸುವಂತೆ ಮನವಿ
ಹೊಸ ಪಡಿತರ ಚೀಟಿ ಪಡೆಯಲು ಇರುವ ನಿಯಮಾವಳಿ ಹಾಗೂ ಹಳಿಯಾಳ ಆಹಾರ ವಿಭಾಗದ ಆಹಾರ ಶಿರಸ್ತೇದಾರ ಕಛೇರಿಯ ಬೇಜವಾಬ್ದಾರಿ ಕಾರ್ಯವೈಖರಿಯಿಂದ ಸಾರ್ವಜನಿಕರಿಗೆ ಉಂಟಾಗುತ್ತಿರುವ ತೊಂದರೆಯನ್ನು ಅತೀ ಶೀಘ್ರದಲ್ಲಿ ಸರಿಪಡಿಸುವಂತೆ ನಗರದ ಬಿಜೆಪಿ ಎಸ್.ಸಿ ಮೋರ್ಚಾದ ಅಧ್ಯಕ್ಷ ದಶರಥ ಬಂಡಿವಡ್ಡರ ಅವರು ಜಿಲ್ಲಾ ಉಸ್ತುವಾರಿ ಸಚಿವರಿಗೆ, ಜಿಲ್ಲಾಧಿಕಾರಿಗಳಿಗೆ, ತಹಶೀಲ್ದಾರರಿಗೆ ಮತ್ತು ಆಹಾರ ವಿಭಾಗದ ಉಪ ನಿರ್ದೇಶಕರಿಗೆ ಲಿಖಿತ ಮನವಿ ಮಾಡಿ ಆಗ್ರಹಿಸಿದ್ದಾರೆ.ಅವರು ಸಲ್ಲಿಸಿದ ಮನವಿ … [Read more...] about ಶಿರಸ್ತೇದಾರ ಕಛೇರಿಯ ಬೇಜವಾಬ್ದಾರಿ ಕಾರ್ಯವೈಖರಿಯನ್ನು ಸರಿಪಡಿಸುವಂತೆ ಮನವಿ