ಕಾರವಾರ:ಅಸಮರ್ಪಕ ಮತ್ತು ತಪ್ಪು ಮಾಹಿತಿ ನೀಡುತ್ತಿದ್ದ ಗ್ರಾಮೀಣ ಕುಡಿಯುವ ನೀರು ಪೂರೈಕೆ ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳ ವಿರುದ್ಧ ಜಿ.ಪಂ ಸದಸ್ಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ ಘಟನೆ ಮಂಗಳವಾರ ನಡೆದ ಸಾಮಾನ್ಯ ಸಭೆಯಲ್ಲಿ ನಡೆಯಿತು. ಜಿ.ಪಂ ಸದಸ್ಯೆ ಪುಷ್ಪಾ ನಾಯ್ಕ ಮಾತನಾಡಿ ಹೊನ್ನಾವರದ ಬಾಳುಬೆಲೆಯಲ್ಲಿ ಕನ್ನಡ ಶಾಲೆ ಶಿಥಿಲಾವಸ್ಥೆ ತಲುಪಿದ್ದು, ಕೂಡಲೇ ನೂತನ ಕಟ್ಟಡ ನಿರ್ಮಿಸುವಂತೆ ಕಳೆದ ಮೂರು ವರ್ಷದಿಂದ ಒತ್ತಾಯಿಸಲಾಗುತ್ತಿದೆ. ಆದರೆ ಕಳೆದ ಕೆಲ ತಿಂಗಳ … [Read more...] about ಜಿಲ್ಲಾ ಪಂಚಾಯತ ಸಭೆ
ನೀರು
ಜಿಲ್ಲಾ ಪಂಚಾಯತದಲ್ಲಿ ಆಯವ್ಯಯ ಮಂಡನೆ ನಡೆಯಿತು
ಕಾರವಾರ:ಉತ್ತರ ಕನ್ನಡ ಜಿಲ್ಲಾ ಪಂಚಾಯತ್ನ 2017-18ನೇ ಸಾಲಿನಲ್ಲಿ ಒಟ್ಟು 78388.18 ಲಕ್ಷ ರೂ. ಮೊತ್ತದ ಒಟ್ಟು ಆಯವ್ಯಯಕ್ಕೆ ಮಂಗಳವಾರ ನಡೆದ ಸಾಮಾನ್ಯ ಸಭೆಯಲ್ಲಿ ಅನುಮೋದನೆ ನೀಡಲಾಯಿತು. ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಜಯಶ್ರೀ ಮೊಗೇರ ಆಯವ್ಯಯವನ್ನು ಸಭೆಯಲ್ಲಿ ಮಂಡಿಸಿದರು. ಇದರಲ್ಲಿ ಜಿಲ್ಲಾ ಪಂಚಾಯತ್ ಕಾರ್ಯಕ್ರಮಗಳಿಗೆ 24654.89 ಲಕ್ಷ ರೂ. ಮತ್ತು ತಾಲೂಕು ಪಂಚಾಯತ್ ಕಾರ್ಯಕ್ರಮಗಳಿಗೆ ಲೆಕ್ಕ ಶೀರ್ಷಿಕೆಯಡಿಯಲ್ಲಿ ರೂ 51257.29 ಲಕ್ಷ ಹಾಗೂ ಗ್ರಾಮ ಪಂಚಾಯತ್ … [Read more...] about ಜಿಲ್ಲಾ ಪಂಚಾಯತದಲ್ಲಿ ಆಯವ್ಯಯ ಮಂಡನೆ ನಡೆಯಿತು
ಪ್ರವಾಸಕ್ಕೆ ಬಂದ ವಿದ್ಯಾರ್ಥಿಗಳು ನೀರುಪಾಲು
ಕುಮಟಾ:ಪ್ರವಾಸಕ್ಕೆಂದು ಕುಮಟಾದ ವನ್ನಳ್ಳಿ ಬೀಚ್ಗೆ ಆಗಮಿಸಿದ್ದ ಐವರು ವಿದ್ಯಾರ್ಥಿಗಳ ಪೈಕಿ ಇಬ್ಬರು ನೀರುಪಾಲಾಗಿರುವ ಘಟನೆ ನಡೆದಿದೆ.ಹಳಿಯಾಳ ಮೂಲದ ಪ್ರಜ್ವಲ್ ಲೋಪಿಸ್ (19), ಫ್ರಾನ್ಸಿಸ್ ಬ್ರಿಗೆನ್ಸಾ (18) ನೀರುಪಾಲಾದವರು. ಇವರು ಇನ್ನು ಮೂರು ವಿದ್ಯಾರ್ಥಿಗಳನ್ನೊಡಗೂಡಿ ಸಮುದ್ರದಲ್ಲಿ ಈಜಲು ತೆರಳಿದ ವೇಳೆ ನೀರಿನಲ್ಲಿ ಮುಳುಗಿದ್ದಾರೆ. ಮೂವರನ್ನು ಸ್ಥಳೀಯರು ರಕ್ಷಿಸಿದ್ದು, ಇನ್ನಿಬ್ಬರಿಗಾಗಿ ಕರಾವಳಿ ಕಾವಲು ಪಡೆಯ ಸಿಬ್ಬಂದಿ ತೀವ್ರ ಶೋಧ ನಡೆಸಿದ್ದಾರೆ. … [Read more...] about ಪ್ರವಾಸಕ್ಕೆ ಬಂದ ವಿದ್ಯಾರ್ಥಿಗಳು ನೀರುಪಾಲು
ನೀರು ಸರಬರಾಜು ಮಾಡಲು ಸೂಕ್ತ ಕ್ರಮ
ಭಟ್ಕಳ:ತಾಲೂಕಿನಲ್ಲಿ ಕುಡಿಯುವ ನೀರಿನ ಅಭಾವ ಇರುವ ಕಡೆ ಸಮರ್ಪಕವಾಗಿ ನೀರು ಪೂರೈಸಲು ಹಾಗೂ ಹಾಳಾಗಿರುವ ಕುಡಿಯುವ ನೀರಿನ ಯೋಜನೆಯ ಪಂಪನ್ನು ದುರಸ್ಥಿ ಪಡಿಸಿ ನೀರು ಸರಬರಾಜು ಮಾಡಲು ಸೂಕ್ತ ಕ್ರಮ ಕೈಗೊಳ್ಳುವಂತೆ ತಾಲೂಕು ಪಂಚಾಯತ್ ಮಾಸಿಕ ಕೆಡಿಪಿ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚಿಸಲಾಯಿತು. ಮಾವಿನಕುರ್ವೆಯಲ್ಲಿ ನೀರಿನ ಅಭಾವ ತೀವ್ರಗೊಂಡಿದ್ದು, ಕುಡಿಯುವ ನೀರಿನ ಯೋಜನೆ ಉದ್ಘಾಟನೆಗೊಂಡು ಒಂದು ವಾರ ಕಳೆದರೂ ಇನ್ನೂ ತನಕ ಪೈಪ್ ಲೈನ್ ವ್ಯವಸ್ಥೆ ಆಗಿಲ್ಲ ಎಂದು ತಾ.ಪಂ. … [Read more...] about ನೀರು ಸರಬರಾಜು ಮಾಡಲು ಸೂಕ್ತ ಕ್ರಮ
ಟ್ಯಾಂಕರ ಮೂಲಕ ನೀರು ಪೂರೈಕೆಯ ಅಭಿಯಾನ
ಕಾರವಾರ: ತಾಲೂಕಿನ ಶೇಜವಾಡ ಶೆಜ್ಜೇಶ್ವರ ದೇವಸ್ಥಾನದ ಬಳಿ ಜಯ ಕರ್ನಾಟಕ ಸಂಘಟನೆಯ ಸಂಸ್ಥಾಪಕ ಮುತ್ತಪ್ಪ ರೈ ರವರ ಜನ್ಮ ದಿನಾಚರಣೆಯ ಅಂಗವಾಗಿ ಟ್ಯಾಂಕರ ಮೂಲಕ ನೀರು ಪೂರೈಕೆಯ ಅಭಿಯಾನಕ್ಕೆ ಮಂಗಳವಾರ ಚಾಲನೆ ನೀಡಲಾಯಿತು. ಶೆಜ್ಜೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಪ್ರದೀಪ ಶೇಜವಾಡಕರ ಮುತ್ತಪ್ಪ ರೈ ಜನ್ಮ ದಿನದ ನಿಮಿತ್ತ ಕೇಕ್ ಕತ್ತರಿಸಿದರು. ಬಳಿಕ ಸ್ಥಳೀಯ ನಿವಾಸಿಗಳಿಗೆ ಟ್ಯಾಂಕರ ಮೂಲಕ ನೀರು ಪೂರೈಸಲಾಯಿತು. ಬಳಿಕ ವಿಪರೀತ ನೀರಿನ ಸಮಸ್ಯೆ ಇರುವ ಪ್ರದೇಶಗಳಾದ … [Read more...] about ಟ್ಯಾಂಕರ ಮೂಲಕ ನೀರು ಪೂರೈಕೆಯ ಅಭಿಯಾನ