ಹೊನ್ನಾವರ:ತಾಲೂಕಿನ ಖರ್ವಾ ಗ್ರಾಮ ಪಂಚಾಯಿತಿಗೆ ಸಂಬಂಧಿಸಿದ ಸುಮಾರು 30 ಮೀಟರ್ ಉದ್ದದ ಕಂಪೌಂಡ್ ತಡೆಗೋಡೆಯನ್ನು ವ್ಯಕ್ತಿಯೊಬ್ಬ ಧ್ವಂಸಗೊಳಿಸಿ ಗ್ರಾ.ಪಂ. ಅಧಿಕಾರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿದ ಬಗ್ಗೆ ಹೊನ್ನಾವರ ಠಾಣೆಯಲ್ಲಿ ದೂರು ದಾಖಲಾಗಿದೆ. ಖರ್ವಾ ಗ್ರಾಮ ಪಂಚಾಯತ ವ್ಯಾಪ್ತಿಯ ಕೊಳಗದ್ದೆ ವ್ಯವಸಾಯ ಸೇವಾ ಸಹಕಾರಿ ಸಂಘದ ಮುಖ್ಯ ಕಾರ್ಯದರ್ಶಿ ಮೋಹನ ಸುಬ್ರಾಯ ನಾಯ್ಕ ಎಂಬುವವನು ಈ ಕೃತ್ಯವೆಸಗಿದ್ದಾನೆ. ಗ್ರಾ.ಪಂ.ಗೆ ಸಂಬಂಧಪಟ್ಟ ಸರ್ಕಾರದ ಆಸ್ತಿಪಾಸ್ತಿ … [Read more...] about ಪಂಚಾಯಿತಿಗೆ ಸಂಬಂಧಿಸಿದ ಕಂಪೌಂಡ್ ಧ್ವಂಸ
ಸಂಘ
ಉಚಿತ ಕಾನೂನು ಸಲಹಾ ಕೇಂದ್ರದ ಉದ್ಘಾಟನೆ ಹಾಗೂ ಕಾನೂನು ಅರಿವು ನೆರವು ಕಾರ್ಯಕ್ರಮ
ಕಾರವಾರ:ಎಚ್.ಐ.ವಿ ಪೀಡಿತರಿಗೂ ಜನ ಸಾಮಾನ್ಯರಂತೆ ಎಲ್ಲಾ ಹಕ್ಕುಗಳಿದ್ದು ಅದನ್ನು ಪಡೆದುಕೊಳ್ಳಲು ಕಾನೂನಿನ ಅಗತ್ಯವಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಟಿ. ಗೋವಿಂದಯ್ಯ ಹೇಳಿದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ಜಿಲ್ಲಾ ಆಸ್ಪತ್ರೆಯ ಎ.ಆರ್.ಟಿ. ಕೇಂದ್ರದಲ್ಲಿ ಉಚಿತ ಕಾನೂನು ಸಲಹಾ ಕೇಂದ್ರವನ್ನು ಆರಂಭಿಸಿದೆ. ಪ್ರತಿ ಶನಿವಾರ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2.00 ಗಂಟೆಯವರೆಗೆ ಉಚಿತ ಕಾನೂನಿನ ಸಲಹೆಯನ್ನು ಪಡೆಯಬಹುದಾಗಿದೆ ಎಂದು ಹೇಳಿದರು.ಜಿಲ್ಲಾ … [Read more...] about ಉಚಿತ ಕಾನೂನು ಸಲಹಾ ಕೇಂದ್ರದ ಉದ್ಘಾಟನೆ ಹಾಗೂ ಕಾನೂನು ಅರಿವು ನೆರವು ಕಾರ್ಯಕ್ರಮ
ಸರ್ಕಾರಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸಾ ವೈದ್ಯರನ್ನು ನೇಮಿಸುವಂತೆ ಆಗ್ರಹಿಸಿ;ಆರೋಗ್ಯ ಸಚಿವರಿಗೆ ಮನವಿ
ಹೊನ್ನಾವರ :ತಾಲೂಕು ಆಟೋ ಚಾಲಕರು ಮತ್ತು ಮಾಲಿಕರ ಸಂಘ ಹಾಠಗೂ ಕರ್ನಾಟಕ ಕ್ರಾಂತಿರಂಗ ಸಂಘಟನೆಯವರು ಆರೋಗ್ಯ ಸಚಿವರಿಗೆ ಮನವಿ ಸಲ್ಲಿಸಿದ್ದಾರೆ. ಹೊನ್ನಾವರದಲ್ಲಿ 100 ಹಾಸಿಗೆಯ ಸೌಲಭ್ಯವಿರುವ ಸುಸಜ್ಜಿತ ಆಸ್ಪತ್ರೆಯನ್ನು ನಿರ್ಮಿಸಲಾಗಿದೆ. ಆದರೆ ಇಂಥ ಸುಸಜ್ಜಿತ ಆಸ್ಪತ್ರೆಗೆ ತಕ್ಕ ವೈದ್ಯರಿಲ್ಲ. ಇಲ್ಲಿ ಖಾಯಂ ಶಸ್ತ್ರಚಿಕಿತ್ಸಾ ವೈದ್ಯರು ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾ ವೈದ್ಯಾಧಿಕಾರಿಗಳಿಗೆ ಹಲವು ಬಾರಿ ವಿನಂತಿಸಲಾಗಿದೆ. ಆದರೆ ಈ ಬಗ್ಗೆ ಇನ್ನೂವರೆಗೆ … [Read more...] about ಸರ್ಕಾರಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸಾ ವೈದ್ಯರನ್ನು ನೇಮಿಸುವಂತೆ ಆಗ್ರಹಿಸಿ;ಆರೋಗ್ಯ ಸಚಿವರಿಗೆ ಮನವಿ
ಮಹಿಳೆಯರಿಗಾಗಿ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮ
ಕಾರವಾರ:ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಕೀಲರ ಸಂಘದ ವತಿಯಿಂದ "ಮಹಿಳೆಯರಿಗಾಗಿ ಕಾನೂನು ಅರಿವು ಮತ್ತು ನೆರವು" ಕಾರ್ಯಕ್ರಮ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಬುಧವಾರ ನಡೆಯಿತು. ಹಿರಿಯ ಸಿವಿಲ್ ನ್ಯಾಯಾಧೀಶ ಟಿ. ಗೋವಿಂದಯ್ಯ ಕಾರ್ಯಕ್ರಮ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು, ಮಹಿಳೆಯರನ್ನು ಜಾಗೃತಗೊಳಿಸಲು ಕಾನೂನು ಪ್ರಾಧಿಕಾರವೂ ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಮಹಿಳೆಯರು … [Read more...] about ಮಹಿಳೆಯರಿಗಾಗಿ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮ
ಸಂಗಮ ವಿಕಾಸ ,ಯುವಕರ ಸ್ವ ಸಹಾಯ ಸಂಘ ಉದ್ಘಾಟನ ಸಮಾರಂಭ
ಕಾರವಾರ:ಕೋಡಿಭಾಗದಲ್ಲಿ ನೂತನವಾಗಿ ಸ್ಥಾಪಿಸಲ್ಪಟ್ಟ ಸಂಗಮ ವಿಕಾಸ ಯುವಕರ ಸ್ವ ಸಹಾಯ ಸಂಘವನ್ನು ಈಚೆಗೆ ಕೆಡಿಸಿಸಿ ಬ್ಯಾಂಕ್ನ ವ್ಯವಸ್ಥಾಪಕಿ ಸುಮಾ ಬಿ ನಾಯಕ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಯುವಕರು ದುಶ್ಚಟಗಳಿಗೆ ಬಲಿಯಾಗದೇ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಉಳಿತಾಯದ ಮನೋಭಾವ ಮೂಡಿದಲ್ಲಿ ವ್ಯಕ್ತಿತ್ವ ಕಟ್ಟಿಕೊಳ್ಳಬಹುದು ಎಂದರು. ನಗರಸಭೆ ಸದಸ್ಯ ರಾಜು ಮಾಳಸೆಕರ್ ಅಧ್ಯಕ್ಷತೆ ವಹಿಸಿದ್ದರು. ಅಂಗನವಾಡಿ ಕಾರ್ಯಕರ್ತೆ ಮಾಲತಿ … [Read more...] about ಸಂಗಮ ವಿಕಾಸ ,ಯುವಕರ ಸ್ವ ಸಹಾಯ ಸಂಘ ಉದ್ಘಾಟನ ಸಮಾರಂಭ